Select Your Language

Notifications

webdunia
webdunia
webdunia
webdunia

ಅಕ್ರಮ ಹಣವರ್ಗಾವಣೆ ಆರೋಪ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ ಮುಖ್ ಅರೆಸ್ಟ್

ಅಕ್ರಮ ಹಣವರ್ಗಾವಣೆ ಆರೋಪ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ ಮುಖ್ ಅರೆಸ್ಟ್
ಮುಂಬೈ , ಮಂಗಳವಾರ, 2 ನವೆಂಬರ್ 2021 (10:46 IST)
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಬಂಧಿಸಲಾಗಿದೆ.

ಸತತ 12 ಗಂಟೆಗಳ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಬಳಿಕ ಬಂಧನ ನಡೆಸಿದ್ದಾರೆ. ಮೊನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯವರ್ತಿಯೊಬ್ಬರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

ಆತನಿಂದ ಅನಿಲ್ ದೇಶ್ ಮುಖ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ ಇಡಿ ಅಧಿಕಾರಿಗಳು ಈಗ ಮಾಜಿ ಸಚಿವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಎನ್ ಸಿಪಿ ನಾಯಕರಾಗಿರುವ ಅನಿಲ್ ದೇಶ್ ಮುಖ ಹಾಲಿ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದರು. ಅಧಿಕಾರದಲ್ಲಿದ್ದಾಗಲೇ ಇಡಿ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಹಲವು ಬಾರಿ ನೋಟಿಸ್ ನೀಡಿತ್ತು. ಕೊನೆಗೆ ಬಾಂಬೆ ಹೈಕೋರ್ಟ್ ಸೂಚನೆ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿ ಹಸಿರು ಪಟಾಕಿಗಳು ಬಲು ದುಬಾರಿ!