Select Your Language

Notifications

webdunia
webdunia
webdunia
webdunia

ಅಂಕೋಲಾ ಗುಡ್ಡ ಕುಸಿತ: ರಾಜ್ಯಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ದೇವೇಗೌಡ ವಾಗ್ದಾಳಿ

HD Devegowda

Sampriya

ನವದೆಹಲಿ , ಗುರುವಾರ, 25 ಜುಲೈ 2024 (14:05 IST)
ನವದೆಹಲಿ: ಅಂಕೋಲಾ ಗುಡ್ಡ ಕುಸಿತದ ಬಗ್ಗೆ ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ ಆರು ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಜುಲೈ 16 ರಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದುವರೆಗೆ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕೇರಳದ ಲಾರಿ ಚಾಲಕ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಇದು ಕರ್ನಾಟಕ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಿದರ್ಶನ. ಕರ್ನಾಟಕ ಸರ್ಕಾರ ರಾಜ್ಯದ ಪರಿಸ್ಥಿತಿ ಬಗ್ಗೆ ನಿರಾಸಕ್ತಿ ತೋರುತ್ತಿದೆ. ಹೆಚ್​​ಡಿ ಕುಮಾರಸ್ವಾಮಿ ಸ್ಥಳ ಪರಿಶೀಲನೆಗೆ ಹೋಗುವವರೆಗೂ ರಾಜ್ಯಸ ರ್ಕಾರ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದ್ದು ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿತು.

ಗೌಡರ ಹೇಳಿಕೆಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಘಟನೆ ಸಂಭವಿಸಿ 9 ಜನರು ಪ್ರಾಣ ಕಳೆದುಕೊಂಡಿದ್ದರೂ ಆರು ದಿನಗಳ ಕಾಲ ಯಾವುದೇ ರಾಜ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಲಿಲ್ಲ. ಇಡೀ ಬೆಟ್ಟವೇ ಕೆಳಗೆ ಜಾರಿತ್ತು. ನಾನು ರಾಜಕೀಯದ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಆದರೆ ಕೇಂದ್ರ ಉಕ್ಕು ಸಚಿವರು ಭೇಟಿ ನೀಡಿದ ಬಳಿಕವಷ್ಟೇ ಅಗ್ನಿಶಾಮಕ ಹಾಗೂ ಮಿಲಿಟರಿ ತಂಡವನ್ನು ಕಳುಹಿಸಲಾಗಿದೆ ಎಂದರು.

ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಪ್ರಧಾನ ಮಂತ್ರಿಗಳ ಕಾರ್ಯಾಲಯವು, ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಸೇನಾ ಪಡೆಯನ್ನು ಕಳುಹಿಸಿದೆ. ಈ ಪಡೆಯು ಭಾನುವಾರ ಮಧ್ಯಾಹ್ನ ಶಿರೂರಿಗೆ ತಲುಪಲಿದೆ. ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ನೀಟ್ ಪರೀಕ್ಷೆ ರದ್ದತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಶಾಸಕ ಪ್ರದೀಪ್ ಈಶ್ವರ್