Publish Date: Tue, 02 Oct 2018 (08:09 IST)
Updated Date: Tue, 02 Oct 2018 (08:11 IST)
ನವದೆಹಲಿ: ಲೋಕಪಾಲ ಮಸೂದೆಗೆ ಆಗ್ರಹಿಸಿ ಗಾಂಧಿ ಜಯಂತಿ ದಿನವಾದ ಇಂದಿನಿಂದಲೇ ಗಾಂಧಿ ವಾದಿ ಅಣ್ಣಾ ಹಜಾರೆ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಅಣ್ಣಾ ಹಜಾರೆ ಪ್ರಧಾನಿ ಮೋದಿಗೆ ಪತ್ರ ಬರೆದು ಭ್ರಷ್ಟಾಚಾರ ನಿಯಂತ್ರಿಸುವ ಲೋಕಪಾಲ ಮಸೂದೆ ಮಂಡಿಸದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಸಿದ್ದರು.
ಆದರೆ ಕೇಂದ್ರ ಈ ವಿಚಾರದಲ್ಲಿ ಇನ್ನೂ ವಿಳಂಬ ಧೋರಣೆ ಅನುಸರಿಸುತ್ತಿರುವುದರ ವಿರುದ್ಧ ಆಕ್ರೋಶಗೊಂಡಿರುವ ಅಣ್ಣಾ ಹಜಾರೆ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.