ಬೆಂಗಳೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಕೆ ಅಣ್ಣಾಮಲೈ ಅವರು ಹೇಳಿದರು.
ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಸೂಚಿಸಿದ್ದಾರೆ. ನಾನು ಮುಂದಿನ ಅಧ್ಯಕ್ಷ ಸ್ಥಾನದ ಸ್ಫರ್ಧೆಯಲ್ಲೂ ಇಲ್ಲ.
ಪಕ್ಷವು ರಾಜ್ಯ ಘಟಕದ ಮುಂದಿನ ಮುಖ್ಯಸ್ಥರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತದೆ ಎಂದು ಹೇಳಿದ್ದಾರೆ.
ಎಐಎಡಿಎಂಕೆ ಮುಖ್ಯಸ್ಥ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ವಾರದ ನಂತರ ಈ ಬೆಳವಣಿಗೆ ಸಂಭವಿಸಿದೆ.
2023 ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎಂಬ ವಿಚಾರವಿತ್ತು. ಇದೀಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ಚುರುಕುಗೊಂಡ ಹಿನ್ನೆಲೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.