ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 21 ದಿನಗಳಲ್ಲಿ 13ನೇ ದುರ್ಘಟನೆ

Sampriya
ಬುಧವಾರ, 10 ಜುಲೈ 2024 (17:40 IST)
Photo Courtesy X
ಸಹರ್ಸಾ: ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಕಿರುಸೇತುವೆ  ಕುಸಿದುಬಿದ್ದಿದ್ದು, ಈ ಮೂಲಕ ಮೂರು ವಾರಗಳ ಅಂತರದಲ್ಲಿ ನಡೆದ 13ನೇ ದುರ್ಘಟನೆ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ (ಸಹರ್ಸಾ) ಜ್ಯೋತಿ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿ, ಕುಸಿತಗೊಂಡಿದ್ದು ಕಿರು ಸೇತುವೆಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸೇತುವೆ ಸುತ್ತಮುತ್ತಲಿನ ಹಳ್ಳಿಗಳೊಂದಿಗೆ ಸಂಪರ್ಕ ಕಲ್ಪಿಸುತ್ತದೆ ಎಂದರು.

ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸೇತುವೆ ಕುಸಿತದ ಸರಣಿ ಘಟನೆಗಳು ಸಂಭವಿಸಿದ್ದು, ಬಿಹಾರ ಸರ್ಕಾರ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

ರಾಜ್ಯದಲ್ಲಿ ಪದೇ ಪದೇ ಸೇತುವೆ ಕುಸಿತ ಪ್ರಕರಣ ನಡೆಸುತ್ತಿರುವುದರಿಂದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಕಳೆದ ವಾರ ಸೂಚನೆ ನೀಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments