Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್

ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್
ಮುಂಬೈ , ಶುಕ್ರವಾರ, 14 ಏಪ್ರಿಲ್ 2023 (14:24 IST)
ಮುಂಬೈ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸದ್ಯಕ್ಕೆ ಸಂಕಷ್ಟ ಬೆಂಬಿಡದಂತೆ ಕಾಣ್ತಿದೆ. ಸ್ವಾತಂತ್ರ್ಯ ಹೋರಾಟಗಾರ ವಿ.ಡಿ ಸಾವರ್ಕರ್ ಅವರ ಮೊಮ್ಮಗ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
 
ಈ ಹಿಂದೆ ರಾಹುಲ್ ಗಾಂಧಿ ಲಂಡನ್ಗೆ ತೆರಳಿದ್ದಾಗ ತಮ್ಮ ಭಾಷಣದಲ್ಲಿ ವಿ.ಡಿ ಸಾವರ್ಕರ್ ವಿರುದ್ಧ ತಪ್ಪು ಆರೋಪ ಮಾಡಿದ್ದಾರೆ ಎಂಬುದಾಗಿ ಈ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಮೊಮ್ಮಗ ಸತ್ಯಕಿ ಸಾವರ್ಕರ್ ತಿಳಿಸಿದ್ದಾರೆ. ಸತ್ಯಕಿ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 
ಕೋರ್ಟ್ ಅಧಿಕಾರಿ ಇಂದು ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ ಇನ್ನೂ ಕೇಸ್ ಸಂಖ್ಯೆ ಸಿಕ್ಕಿಲ್ಲ ಎಂದು ಸತ್ಯಕಿ ಸಾವರ್ಕರ್ ಹೇಳಿದ್ದಾರೆ.  
 

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಔಷಧ : 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು!