Select Your Language

Notifications

webdunia
webdunia
webdunia
webdunia

ದಾಳಿ ನಡೆದ ಮನೆ ಬಳಿ ಮತ್ತೊಂದು ಸ್ಫೋಟ! ಮಗು ಸಾವು

ದಾಳಿ ನಡೆದ ಮನೆ ಬಳಿ ಮತ್ತೊಂದು ಸ್ಫೋಟ!  ಮಗು ಸಾವು
ಶ್ರೀನಗರ , ಸೋಮವಾರ, 2 ಜನವರಿ 2023 (12:28 IST)
ಶ್ರೀನಗರ : ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿತ್ತು.

ಇಂದು ದಾಳಿ ನಡೆದ ಮನೆ ಬಳಿಯೇ ಇನ್ನೊಂದು ಸ್ಫೋಟ  ಸಂಭವಿಸಿದ್ದು, ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಿನ್ನೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಗ್ರರು ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೂರು ಮನೆಗಳಲ್ಲಿ ದಾಳಿ ನಡೆಸಿದ್ದ ಉಗ್ರರು ನಾಲ್ವರನ್ನು ಕೊಂದಿದ್ದರು. 

ಇಂದು ನಡೆದ ಸ್ಫೋಟ ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ಇದು ನಿನ್ನೆ ಗುಂಡಿನ ದಾಳಿ ನಡೆದ ಮನೆಗಳ ಸಮೀಪವಿದೆ ಎನ್ನಲಾಗಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ.

ಗಾಯಗೊಂಡಿರುವ ಐವರ ಪೈಕಿ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಲ್ಲಿ ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ನೋಟ್ ಬ್ಯಾನ್‌ ನಿರ್ಧಾರ ನ್ಯಾಯ ಸಮ್ಮತವಾಗಿದೆ : ಸುಪ್ರೀಂ