Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ!

ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ!
NewDelhi , ಗುರುವಾರ, 2 ಮಾರ್ಚ್ 2017 (09:23 IST)
ನವದೆಹಲಿ: ದೆಹಲಿಯಲ್ಲಿ ಮತ್ತೊಮ್ಮೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದೆ. 15 ವರ್ಷದ ಬಾಲಕಿಯನ್ನು ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದ ಯುವಕರ ಗುಂಪು ಗ್ಯಾಂಗ್ ರೇಪ್ ಮಾಡಿದೆ.


ಬಿಂದಾಪುರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಆರೋಪಿಗಳ ಪೈಕಿ ಇಬ್ಬರಲ್ಲಿ ಒಬ್ಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದವರೂ ಅಪ್ರಾಪ್ತರೇ. ಕೃತ್ಯವೆಸಗಿದ ಮೇಲೆ ಆಕೆಯನ್ನು ಮನೆಯ ಸಮೀಪವೇ ಇಳಿಸಿ ಆರೋಪಿಗಳು ಪರಾರಿಯಾಗಿದ್ದರು. ಇನ್ನೊಬ್ಬಾತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸದ್ಯಕ್ಕೆ ಬಾಲಕಿ ದೀನ ದಯಾಳ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಘಟನೆ ನಡೆದಿದೆ. ಬಾಲಕಿ 10 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ತರಗತಿ ಮುಗಿಸಿಕೊಂಡು ಬರುವ ವೇಳೆಗೆ ಆಕೆಯ ಗೆಳಯರೊಬ್ಬರು ಕಾರ್ ನಲ್ಲಿ ಲಿಫ್ಟ್ ಕೊಡುವುದಾಗಿ ಕರೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಶಿಕಲಾಗೆ ಎಸಿ ಇಲ್ಲ, ಚೆನ್ನೈಗೆ ಶಿಫ್ಟ್ ಆಗಲ್ಲ: ಡಿಐಜಿ ಸ್ಪಷ್ಟನೆ