ದೆಹಲಿ ಸಿಎಂಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆ: ಕೇಜ್ರಿವಾಲ್‌ಗೆ ಮತ್ತೆ ಜೈಲುವಾಸ

Sampriya
ಬುಧವಾರ, 14 ಆಗಸ್ಟ್ 2024 (14:34 IST)
x
ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.

 ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಆಗಸ್ಟ್ 23ರವರೆಗೆ ಕೇಜ್ರಿವಾಲ್ ಜೈಲುವಾಸ ಮುಂದುವರಿಯಲಿದೆ.


ಸಿಬಿಐ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.


ಕೇಜ್ರಿವಾಲ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಮನವಿಯನ್ನು ಸೋಮವಾರ ಪರಿಗಣಿಸಿದ್ದ ಕೋರ್ಟ್‌ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತ್ತು.

ದೆಹಲಿ ಹೈಕೋರ್ಟ್ ಆಗಸ್ಟ್ 5ರಂದು ಕೇಜ್ರಿವಾಲ್‌ ಅವರ ಬಂಧನವನ್ನು ಕಾನೂನುಬದ್ಧ ಎಂದು ಹೇಳಿತ್ತು. ಅಲ್ಲದೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಸಿಬಿಐ ಪ್ರಕರಣದಲ್ಲಿ ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments