Select Your Language

Notifications

webdunia
webdunia
webdunia
webdunia

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ire accident at firecracker factory, Ambedkar Konaseema district, Lakshmi Ganapathi firecracker manufacturing unit

Sampriya

ಹೈದರಾಬಾದ್ , ಬುಧವಾರ, 8 ಅಕ್ಟೋಬರ್ 2025 (17:51 IST)
Photo Courtesy X
ಹೈದರಾಬಾದ್: ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. 

ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದಿದೆ. ಈ ಘಟನೆಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದಾರೆ. ಇತರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪಟಾಕಿ ತಯಾರಿಸುವಾಗಲೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಘಟಕದೊಳಗಿದ್ದ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಇದೇ ವೇಳೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ದುರ್ಘಟನೆಯಿಂದಾಗಿ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಇಂತಹ ಪಟಾಕಿ ತಯಾರಿಕಾ ಘಟಕಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸದಿದ್ದರೆ ಇಂಥ ಭೀಕರ ಘಟನೆಗಳು ಮರುಕಳಿಸಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಇದೇ ರೀತಿಯ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಕೆಲವೇ ತಿಂಗಳುಗಳ ನಂತರ ಈ ದುರಂತ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು