Publish Date: Thu, 24 Oct 2019 (08:18 IST)
Updated Date: Thu, 24 Oct 2019 (08:20 IST)
ನವದೆಹಲಿ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ದೆಹಲಿ ಹೈಕೋರ್ಟ್ ನ ನ್ಯಾ.ಸುರೇಶ್ ಕುಮಾರ್ ಕೈಟ್ ಅವರು ನಿನ್ನೆ ಡಿಕೆ ಶಿವಕುಮಾರ್ ಅವರಿಗೆ 25 ಲಕ್ಷ ರೂ, ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ನೀಡಬೇಕೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದರು.
ಆದರೆ ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.