Publish Date: Thu, 06 Jul 2023 (13:10 IST)
Updated Date: Thu, 06 Jul 2023 (13:13 IST)
ರಾಂಚಿ : ಸಾಕಷ್ಟು ಸುದ್ದಿಯಾಗಿದ್ದ ತಬ್ರೇಜ್ ಅನ್ಸಾರಿ ಹತ್ಯೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳು ದೋಷಿಗಳೆಂದು ಜಾರ್ಖಂಡ್ನ ಖಾರ್ಸಾವಾನ್ ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಅಪರಾಧಿಗಳಿಗೆ ಐಪಿಸಿ ಸೆಕ್ಷನ್ 304ರ (ಅಪರಾಧಿಕ ಮಾನವ ಹತ್ಯೆ) ಅಡಿಯಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ ಎಲ್ಲಾ ಅಪರಾಧಿಗಳಿಗೂ ತಲಾ 15,000 ರೂ. ದಂಡವನ್ನೂ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಇಬ್ಬರೂ ಆರೋಪಿಗಳನ್ನು ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.