ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು : ಮೋದಿ

Webdunia
ಸೋಮವಾರ, 15 ಆಗಸ್ಟ್ 2022 (09:09 IST)
ನವದೆಹಲಿ : ದೇಶದ ಎಲ್ಲ ಭಾಗದಲ್ಲೂ ಒಂದಲ್ಲ ಒಂದು ರೂಪದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.
 
ವಿಶ್ವದ ಮೂಲೆ ಮೂಲೆಯಲ್ಲಿರುವ ಭಾರತೀಯರು ಧ್ವಜಾರೋಹಣ ಮಾಡುತ್ತಿದ್ದಾರೆ. ಅನಿವಾಸಿ ಭಾರತೀಯರಿಗೂ ನಾನು ಶುಭಾಶಯ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

ಇಂದು ಬೆಳಗ್ಗೆ ರಾಜಘಾಟ್ ಗೆ ಆಗಮಿಸಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ತೆರಳಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರ, ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಗೆ ತಕ್ಕಂತೆ ಕೆಲಸ ಮಾಡಬೇಕು. ದೇಶದ ಜನರನ್ನು ಕಾಯಿಸಲು ಸಾಧ್ಯವಿಲ್ಲ ಎಂದರು.

ಗುಲಾಮಿತನದ ವಿರುದ್ಧ ಸಾಕಷ್ಟು ಜನರು ಹೋರಾಟ ಮಾಡುತ್ತಿದ್ದಾರೆ. ಜೈಲು ಶಿಕ್ಷೆ ಅನುಭವಿಸಿದ್ದಾರೆ, ಯುದ್ಧ ಮಾಡಿದ್ದಾರೆ, ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹ ಮಹನೀಯರ ನೆನಪು ಮಾಡಿಕೊಳ್ಳುವುದು ನಮ್ಮ ಕರ್ತವ್ಯ.

ಜೊತೆಗೆ ಅವರ ಕನಸುಗಳನ್ನು ಈಡೇರಿಸಬೇಕಿದೆ. ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವಾರು ಮಹಿಳೆಯರು ದೇಶ ಮಹಿಳೆಯ ಶಕ್ತಿ ಏನು ಎನ್ನುವುದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments