Select Your Language

Notifications

webdunia
webdunia
webdunia
webdunia

ಯಾವುದೇ ಕ್ಷಣದಲ್ಲಿ ಯುದ್ಧ ಎದುರಾಗುವ ಸಾಧ್ಯತೆ : ಏರ್ ಚೀಫ್ ಬಿ.ಎಸ್. ಧನೋವಾ

ಯಾವುದೇ ಕ್ಷಣದಲ್ಲಿ ಯುದ್ಧ ಎದುರಾಗುವ ಸಾಧ್ಯತೆ :  ಏರ್ ಚೀಫ್ ಬಿ.ಎಸ್. ಧನೋವಾ
ನವದೆಹಲಿ , ಭಾನುವಾರ, 21 ಮೇ 2017 (11:09 IST)
ಯಾವುದೇ ಕ್ಷಣದಲ್ಲಿ ಯುದ್ಧ ಎದುರಾಗುವ ಸಾಧ್ಯತೆಯಿದ್ದು, ಪರಿಸ್ಥಿತಿಯನ್ನೂ ಸಮರ್ಥವಾಗಿ ನಿಭಾಯಿಸಲು ಕಾರ್ಯಾಚರಣೆಗೆ ಸಿದ್ಧರಾಗಿ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ತಿಳಿಸಿದ್ದಾರೆ.
 
ಬಿ.ಎಸ್ ಧನೋವಾ ಅವರು ಭಾರತೀಯ ವಾಯುಪಡೆಯ (ಐಎಎಫ್) ಪ್ರತಿಯೊಬ್ಬ ಅಧಿಕಾರಿಗಳಿಗೂ ವೈಯಕ್ತಿಕ ಪತ್ರ ಬರೆಯುವ ಮೂಲಕ ಸೂಚನೆ ನೀಡಿದ್ದಾರೆ. ಪ್ರಸ್ತಕ್ತ ಸನ್ನಿವೇಶದಲ್ಲಿ ಉಪಖಂಡದಲ್ಲಿ ಸಾಂಪ್ರದಾಯಿಕ ಬೆದರಿಕೆ ಬರುತ್ತಿದೆ. ಈ ಹಿನ್ನಲೆಯಲ್ಲಿ ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಯಾವುದೇ ಕ್ಷಣದಲ್ಲಾದರು ಸಜ್ಜಾಗಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಗಮನ ಹರಿಸಲು ತರಬೇತಿಯ ಅಗತ್ಯವೂ ಇದೆ. 
 
ಸಾಂಪ್ರದಾಯಿಕ ಬಾಹ್ಯ ಬೆದರಿಕೆಗಳ ಮೂಲಕ ಪಾಕಿಸ್ತಾನ ಯುದ್ಧಕ್ಕೆ ತಯಾರಾಗುತ್ತಿದೆ. ಇದರ ಪರಿಣಾಮದಿಂದಾಗಿಯೇ ಸೇನಾ ನೆಲೆಗಳ ಮೇಲೆ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಹಿಂಸಾಚಾರ ಹೆಚ್ಚಾಗತೊಡಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಸಮಯದಲ್ಲೂ ಬೇಕಾದರೂ ಕಾರ್ಯಾಚರಣೆ ನಡೆಸಬೇಕಾದ ಅಗತ್ಯತೆ ಎದುರಾಗಬಹುದು ಎಂದು  ವಾಯುಪಡೆಯ ಸುಮಾರು 12,000 ಅಧಿಕಾರಿಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇವಿಎಂ ತಿರುಚಲು ಅಸಾಧ್ಯ:: ಇಸಿ ಸವಾಲು