Select Your Language

Notifications

webdunia
webdunia
webdunia
Saturday, 5 April 2025
webdunia

ಆರಿಫ್ ಖಾನ್ನನ್ನು ವಜಾಗೊಳಿಸಿದ ಕೇರಳ ಸರ್ಕಾರ

ಆರಿಫ್ ಖಾನ್
ತಿರುವನಂತಪುರಂ , ಶುಕ್ರವಾರ, 11 ನವೆಂಬರ್ 2022 (10:10 IST)
ತಿರುವನಂತಪುರಂ : ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯ ಸರ್ಕಾರ ಗುರುವಾರ ವಜಾಗೊಳಿಸಿದೆ.

ಕೇರಳದಲ್ಲಿ ಹಲವು ದಿನಗಳಿಂದ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ನಡೆಯುತ್ತಿದ್ದು, ಇದೀಗ ತಾರಕಕ್ಕೇರಿದೆ. ಬುಧವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ವಜಾಗೊಳಿಸಲು ಕೇರಳದ ಎಡ ನೇತೃತ್ವದ ಸರ್ಕಾರ ನಿರ್ಧರಿಸಿದ್ದು, ಇಂದು ಅವರನ್ನು ವಜಾಗೊಳಿಸಿದೆ.

ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಹೆಚ್ಚು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ವಜಾಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇದು ಯುದ್ಧದ ಸಮಯ ಅಲ್ಲ: ಜೈಶಂಕರ್