ಗಾಂಧಿನಗರ: ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಹೆಲಿಕಾಪ್ಟರ್ ಮತ್ತು ವಿಮಾನ ದುರಂತ ಪ್ರಕರಣಗಳು ಸಂಭವಿಸುತ್ತಿವೆ. ಸೇನಾ ಹೆಲಿಕಾಪ್ಟರ್ ಒಂದು ಪತನಗೊಂಡಿರುವ ಘಟನೆ ಗುಜರಾತ್ ನ ಪೋರ್ ಬಂದರ್‌ನಲ್ಲಿ ಇಂದು ನಡೆದಿದೆ.
ಭಾರತೀಯ ಕೋಸ್ಟ್‌ಗಾರ್ಡ್‌ನ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್ ಗುಜರಾತ್‌ನ ಪೋರಬಂದರ್‌ನಲ್ಲಿ ತರಬೇತಿಯ ವೇಳೆ ಪತನಗೊಂಡು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅದರಲ್ಲಿ ಇಬ್ಬರು ಪೈಲಟ್‌ಗಳು ಸೇರಿ ಮೂವರು ಇದ್ದರು. ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಸೇನಾ ಹೆಲಿಕಾಪ್ಟರ್ ಪತನಗೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನಾ ಹೆಲಿಕಾಪ್ಟರ್ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.