ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಮೇಲೆ ದುರುಳರು ಅತ್ಯಾಚಾರ ನಡೆಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
ನವದೆಹಲಿಯಲ್ಲಿ ನಡೆದ ಘಟನೆಯಲ್ಲಿ 12 ವರ್ಷದ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಸ್ಥಳೀಯರು ಪೊಲೀಸರಿಗೆ ಸುದ್ದಿ ತಿಳಿಸಿ ಆಸ್ಪತ್ರೆಗೆ ರವಾನಿಸುವಲ್ಲಿ ನೆರವಾಗಿದ್ದರು.
ಈ ನಡುವೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಘೋಷಣೆ ಮಾಡಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆ ಮುಂದುವರಿದಿದೆ.