Webdunia - Bharat's app for daily news and videos

Install App

ಹುಡುಗಿಯರ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ವಂಚಿಸುತ್ತಿದ್ದ ಆರೋಪಿ ಅರೆಸ್ಟ್

Webdunia
ಶುಕ್ರವಾರ, 22 ಫೆಬ್ರವರಿ 2019 (08:51 IST)
ಬೆಂಗಳೂರು : ಯುವಕನೊಬ್ಬ ಹುಡುಗಿಯರ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಅಂದವಾಗಿರುವ ಹುಡುಗಿಯರ ಫೋಟೋ ಹಾಕಿ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ತುಮಕೂರಿನ ಶಿರಾ ಗೇಟ್ ಕೆ.ಹೆಚ್.ಬಿ ಕಾಲೋನಿ ವಾಸಿಯಾಗಿರುವ ಪ್ರಖ್ಯಾತ್  ಎಂಬಾತ ವಿನುತ ಹಾಗೂ ವಿಜೇತ ಎಂಬ ಹುಡುಗಿಯರ ಹೆಸರಿನಲ್ಲಿ ನಕಲಿ  ಫೇಸ್‍ಬುಕ್ ಖಾತೆ ತೆರೆದು ತಾನು ಬೆಂಗಳೂರಿನ ಖಾಸಗಿ ಕಾಲೇಜ್ ವಿದ್ಯಾರ್ಥಿನಿ ಎಂದು ಪೋಸ್ಟ್ ಗಳನ್ನು ಹಾಕುತ್ತಿದ್ದ. ಅಷ್ಟೇ ಅಲ್ಲದೇ ಕೆಲವು ಹುಡುಗಿಯರ ಖಾಸಗಿ ಪೋಟೋ ಮತ್ತು ಮಾಹಿತಿ ಪಡೆದು ಲಕ್ಷ ಲಕ್ಷ ರೂ. ಹಣಕ್ಕೆ ಆರೋಪಿ ಬೇಡಿಕೆ ಇಡುತ್ತಿದ್ದನು. ಅಲ್ಲದೆ ಆನ್‍ಲೈನ್ ಮೂಲಕ ಹಣ ಪಡೆದು ಜನರಿಗೆ ವಂಚಿಸುತ್ತಿದ್ದನು.


ಈತನಿಂದ ವಂಚನೆಗೊಳಗಾದವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments