ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯಾ ಸಯೀದ್ ಅವರ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಕೆಯಾಗಿದೆ. ಇದೀಗ ಪ್ರಕರಣ ಸಂಬಂಧ ಶಂಕಿತ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.
ಮುಫ್ತಿ ಮೊಹಮ್ಮದ್ ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಡಿಸೆಂಬರ್ 1989ರಲ್ಲಿ ರುಬೈಯಾ ಸಯೀದ್ ಅವರನ್ನು ಜಿಕೆಎಲ್‌ಎಫ್ ಉಗ್ರರು ಅಪಹರಿಸಿದ್ದರು. 36 ವರ್ಷಗಳ ಹಿಂದೆ ನಡೆದ ಅಪರಾಧದಲ್ಲಿ ಭಾಗಿಯಾಗಿದ್ದ, ಶ್ರೀನಗರದ ಇಶ್ಬರ್ ನಿಶಾತ್‌ನ ನಿವಾಸಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಪಹರಣವಾದ ಐದು ದಿನಗಳ ಬಳಿಕ, ಅಂದಿನ ವಿ.ಪಿ ಸಿಂಗ್ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರವು ಐವರು ಭಯೋತ್ಪಾದಕರನ್ನು ಬಿಡುಗಡೆಗೊಳಿಸಿದ ನಂತರ ರುಬೈಯಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ರುಬೈಯಾ ಅವರು ತಮಿಳುನಾಡಿನಲ್ಲಿ ವಾಸಿಸುತ್ತಿದ್ದಾರೆ.