ಸ್ಕೂಲ್ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕ ಅರೆಸ್ಟ್

ಬುಧವಾರ, 31 ಅಕ್ಟೋಬರ್ 2018 (07:41 IST)
ಪುಣೆ : ಪುಣೆಯಲ್ಲಿ ಇಂಗ್ಲಿಷ್ ಮೀಡಿಯಂ ಸೂಲ್ಕ್ ವೊಂದರಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 40 ವರ್ಷದ ದೈಹಿಕ ಶಿಕ್ಷಕನೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಳು ವರ್ಷಗಳಿಂದ ಶಿಕ್ಷಕ ಆ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೇ ಶಾಲೆಯಲ್ಲಿ ಗುಡ್​ ಟಚ್​, ಬ್ಯಾಡ್​ ಟಚ್​ ಅಭಿಯಾನದ ಭಾಗವಾಗಿದ್ದ ದೈಹಿಕ ಶಿಕ್ಷಕ 9ನೇ ಕ್ಲಾಸ್​ನ ನಾಲ್ವರು ಬಾಲಕರನ್ನು ಕಳೆದ 5 ತಿಂಗಳ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

ಈ ಘಟನೆಗೆ ಸಂಬಂಧಿಸಿದಂತೆ ಬಾಲಕರು ಶಿಕ್ಷಕನ ವಿರುದ್ಧ  ಹದಾಪ್ಸರ್​ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಕ್ರೀಡಾ ಶಿಕ್ಷಕನನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪೊಲೀಸ್ ವೇಷ ಧರಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು