Publish Date: Sat, 05 Jan 2019 (08:05 IST)
Updated Date: Sat, 05 Jan 2019 (08:06 IST)
ಚಂಡೀಗಢ : ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿದ್ದಲ್ಲದೇ ಸತತ ಎರಡು ತಿಂಗಳು ಕಾಲ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಸಂತ್ರಸ್ತೆಯ ತಾಯಿಯ ಅಜ್ಜಿ ಕಳೆದ ವರ್ಷ ಅಕ್ಟೋಬರ್ 12 ರಂದು ಹರಿಯಾಣದಲ್ಲಿರುವ ಅಂಬಾಲಾ ನಿವಾಸಿಯಾದ ರಿಂಕು ಎಂಬಾತನಿಗೆ ಬಲವಂತವಾಗಿ ಅಪ್ರಾಪ್ತೆಯನ್ನು ಮದುವೆ ಮಾಡಿಸಿದ್ದಳು. ಬಳಿಕ ಆತನು ಅಪ್ರಾಪ್ತೆಗೆ ಕಿರುಕುಳ ನೀಡಿ ಸತತ ಎರಡು ತಿಂಗಳು ಕಾಲ ಅತ್ಯಾಚಾರ ಎಸಗಿದ್ದಾನೆ.
ಆತನ ಕಿರುಕುಳದಿಂದ ಬೇಸತ್ತ ಸಂತ್ರಸ್ತೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾಳೆ. ಸಂತ್ರಸ್ತೆಯ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.