Publish Date: Wed, 25 Oct 2017 (14:41 IST)
Updated Date: Wed, 25 Oct 2017 (14:43 IST)
ಜಿಎಸ್‌ಟಿ ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎನ್ನುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜಿಎಸ್‌ಟಿ ಬಗ್ಗೆ ಹೆಚ್ಚಿಗೆ ತಿಳಿದುಕೊಳ್ಳುವ ಬುದ್ದಿಶಕ್ತಿಯಿಲ್ಲ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರಕಾರ ದೀರ್ಘಾವದಿ ಯೋಜನೆಗಳಿಗೆ ಚಾಲನೆ ನೀಡಿದೆ. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿದೆ. ಪ್ರಧಾನಿ ಮೋದಿ ನೇತೃತ್ವದ ಸರಕಾರ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರಸರಕಾರವನ್ನು ಟೀಕಿಸುವುದೇ ಕಾಂಗ್ರೆಸ್ ಪಕ್ಷದ ಮುಖ್ಯ ಗುರಿಯಾಗಿದೆ. ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟಿರುವುದು ಆ ಪಕ್ಷದ ನಾಯಕರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.