Webdunia - Bharat's app for daily news and videos

Install App

ನಂಗೆ ದೊಡ್ಡ ರೋಗ ಬಂದಿರೋ ಹಾಗಿದೆ, ಜೈಲಿಗೆ ಹೋಗ್ಬರ್ತೀನಿ, ದೆಹಲಿ ಬಗ್ಗೆ ಹುಷಾರು: ಅರವಿಂದ್ ಕೇಜ್ರಿವಾಲ್

Krishnaveni K
ಶುಕ್ರವಾರ, 31 ಮೇ 2024 (13:26 IST)
ನವದೆಹಲಿ: ಜಾಮೀನು ವಿಸ್ತರಣೆ ನಿರಾಕರಣೆ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲು ಪಾಲಾಗಲಿದ್ದಾರೆ.

ದೆಹಲಿ ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಪಕ್ರರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೇಜ್ರಿವಾಲ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ ಇತ್ತೀಚೆಗೆ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ನಾಳೆ ಮಧ್ಯಂತರ ಜಾಮೀನಿನ ಅವಧಿ ಮುಕ್ತಾಯಗೊಳ್ಳಲಿದ್ದು ಕೇಜ್ರಿವಾಲ್ ಮತ್ತೆ ಜೈಲಿಗೆ ಶರಣಾಗಬೇಕಿದೆ.

ಆದರೆ ಇದಕ್ಕೆ ಮೊದಲು ಅವರು ನನಗೆ ಗಂಭೀರ ಕಾಯಿಲೆ ಇರುವಂತಿದೆ. ವೈದ್ಯಕೀಯ ಪರೀಕ್ಷೆಗಾಗಿ ಜಾಮೀನು ಅವಧಿ ವಿಸ್ತರಿಸಿ ಎಂದು ಕೋರ್ಟ್ ಮೊರೆ ಹೋಗಿದ್ದರು. ಆದರೆ ಕೋರ್ಟ್ ಇದನ್ನು ನಿರಾಕರಿಸಿತ್ತು. ಇಷ್ಟು ದಿನ ಅನಾರೋಗ್ಯ ಕಂಡುಬರಲಿಲ್ಲವೇ ಎಂದು ಪ್ರಶ್ನಿಸಿತ್ತು.

ಇದೀಗ ಜಾಮೀನು ನಿರಾಕರಣೆ ಬೆನ್ನಲ್ಲೇ ದೆಹಲಿ ಜನರನ್ನುದ್ದೇಶಿಸಿ ಮಾತನಾಡಿರುವ ಕೇಜ್ರಿವಾಲ್, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ನನಗೆ ಗಂಭೀರ ಕಾಯಿಲೆ ಬಂದಂತಿದೆ. ಇದಕ್ಕಾಗಿ ನಾನು ಸಾಕಷ್ಟು ವೈದ್ಯಕೀಯ ಪರೀಕ್ಷೆಗೊಳಪಡಬೇಕಿದೆ. ನನ್ನ ಪ್ರಾಣ ಹೋದರೂ ಚಿಂತೆಯಿಲ್ಲ. ನಾನು ಡೆಲ್ಲಿಯ ಬಗ್ಗೆ ಯೋಚನೆ ಮಾಡುತ್ತಿರುತ್ತೇನೆ. ನಾನು ಜೈಲಿಗೆ ಹೋದ ಮೇಲೆ ದೆಹಲಿ ಮತ್ತು ನನ್ನ ಆಮ್ ಆದ್ಮಿ ಪಕ್ಷವನ್ನು ನೀವೇ ನೋಡಿಕೊಳ್ಳಬೇಕು ಎಂದು ಜನತೆಗೆ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments