Select Your Language

Notifications

webdunia
webdunia
webdunia
webdunia

ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ

Aravind Kejriwal

Krishnaveni K

ನವದೆಹಲಿ , ಸೋಮವಾರ, 27 ಮೇ 2024 (11:14 IST)
ನವದೆಹಲಿ: ದೆಹಲಿ ಅಬಕಾರಿ ಅಕ್ರಮ ಹಗರಣದಲ್ಲಿ ಬಂಧಿತರಾಗಿ ಇದೀಗ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ.

ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಅವಧಿ ಜೂನ್ 2 ರವರೆಗೆ ಮಾತ್ರವಿದೆ. ಅದಾದ ಬಳಿಕ ಮತ್ತೆ ಅವರು ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ. ಆದರೆ ತಮ್ಮ ಮಧ್ಯಂತರ ಜಾಮೀನಿನ ಅವಧಿಯನ್ನು ಮತ್ತೆ 7 ದಿನಗಳಿಗೆ ಮುಂದೂಡುವಂತೆ ಕೇಜ್ರಿವಾಲ್ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಕೇಜ್ರಿವಾಲ್ ಗೆ ಜಾಮೀನು ನೀಡುವಾಗ ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾತ್ರ ಜಾಮೀನು ನೀಡಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಅವರ ಮೇಲಿನ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದು, ನಂತರ ಶರಣಾಗಬೇಕೆಂದು ಸೂಚಿಸಿತ್ತು.

ಆದರೆ ಇದೀಗ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಗೆದ್ದರೆ ತಮ್ಮ ನಸೀಬು ಬದಲಾಗಬಹುದು ಎಂಬ ವಿಶ್ವಾಸದಲ್ಲಿ ಕೇಜ್ರವಾಲ್ ಇದ್ದಾರೆ. ಅದೇ ಕಾರಣಕ್ಕೆ ಮಧ್ಯಂತರ ಜಾಮೀನು ಅರ್ಜಿ ಮುಂದುವರಿಸಲು ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಕೋರ್ಟ್ ಯಾವ ರೀತಿ ಪ್ರತಿಕ್ರಿಯಿಸುತ್ತದೋ ನೋಡಬೇಕಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೆಮೆಲ್ ಚಂಡಮಾರುತ, ಉತ್ತರದಲ್ಲಿ ಭಾರೀ ಮಳೆ