Publish Date: Tue, 31 Jan 2023 (11:05 IST)
Updated Date: Tue, 31 Jan 2023 (11:34 IST)
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
38 ವರ್ಷದ ಮಾನಸಿಕ ಅಸ್ವಸ್ಥನೊಬ್ಬ ಸೋಮವಾರ ಮಧ್ಯರಾತ್ರಿ 12.05ಕ್ಕೆ ಪಿಸಿಆರ್ ಗೆ ಕರೆ ಮಾಡಿ ಕೇಜ್ರಿವಾಲ್ಗೆ ಕೊಲೆ ಬೆದರಿಕೆ ಹಾಕಿದ್ದಾನೆ.
ಕರೆ ಬಂದ ತಕ್ಷಣ ಎಚ್ಚೆತ್ತ ದೆಹಲಿ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ದೆಹಲಿಯ ಗುಲಾಬಿ ಬಾಗ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.