ದೆಹಲಿಯ ಸಿಎಂ ಆಗಿ ಇಂದು ಅರವಿಂದ್ ಕ್ರೇಜಿವಾಲ್ ಪ್ರಮಾಣವಚನ ಸ್ವೀಕಾರ

ಭಾನುವಾರ, 16 ಫೆಬ್ರವರಿ 2020 (10:43 IST)
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಪ್ ಮುಖ್ಯಸ್ಥ ಅರವಿಂದ್ ಕ್ರೇಜಿವಾಲ್ ಅವರು ಇಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಇಂದು ನಗರದ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ದೆಹಲಿ ಲೆಪ್ಟಿನೆಂಟ್ ಗವರ್ನರ್  ಅನಿಲ್ ಬೈಜಲ್ ಪ್ರಮಾಣವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹಲವು ರಾಜಕೀಯ ಗಣ್ಯರು ಆಗಮಿಸಲಿದ್ದಾರೆ ಎನ್ನಲಾಗಿದೆ.


ಪ್ರಧಾನಿ ಮೋದಿ ಅವರಿಗೂ ಕೂಡ ಪ್ರಮಾಣವಚನ ಕಾರ್ಯಕ್ರಮಕ್ಕೆ  ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಮೋದಿ ಭಾಗವಹಿಸಲಿದ್ದಾರಾ ಎಂಬುದು ಕಾದುನೋಡಬೇಕಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಿಮೆ ಹಣ ಪಡೆಯಲು ಮಾವನನ್ನೇ ಕೊಂದ ಭೂಪ