ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

Sampriya
ಬುಧವಾರ, 10 ಸೆಪ್ಟಂಬರ್ 2025 (17:36 IST)
Photo Credit X
ಭೋಪಾಲ್: ತನ್ನ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರ ಬರ್ತಡೇ ಪಾರ್ಟಿಯಲ್ಲಿ ಎಎಸ್‌ಐವೊಬ್ಬರು ಮಹಿಳಾ ನರ್ತಕಿಯರ ಜೊತೆ "ಆಕ್ಷೇಪಾರ್ಹ" ರೀತಿಯಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು.

ಇದೀಗ ಈ ಸಂಬಂಧ ದಾತಿಯಾದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಕ್ಲಿಪ್, ಅದೇ ಠಾಣೆಯ ಕಾನ್‌ಸ್ಟೆಬಲ್‌ನ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಎನ್ನಲಾಗಿದೆ. 

ಎಎಸ್‌ಐ ಬಾಲಿವುಡ್ ಹಾಡುಗಳಿಗೆ ನೃತ್ಯಗಾರ್ತಿಯ ಜತೆ ನೃತ್ಯ ಮಾಡುವಾಗ ಅಶ್ಲೀಲ ಸನ್ನೆಗಳನ್ನು ಮಾಡುವುದನ್ನು ತೋರಿಸುತ್ತದೆ. 

ಸೆಪ್ಟೆಂಬರ್ 2 ರಂದು ಡಾಟಿಯಾದಲ್ಲಿನ ಹೋಟೆಲ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು, ಅಲ್ಲಿ ವೃತ್ತಿಪರ ನೃತ್ಯಗಾರರನ್ನು ಆಹ್ವಾನಿಸಲಾಗಿತ್ತು. ದತಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೂರಜ್ ವರ್ಮಾ ಅವರು ವೀಡಿಯೊ ಪ್ರಸಾರದ ನಂತರ ಇಬ್ಬರೂ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿದ್ದಾರೆ. 

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments