ಕ್ಷುಲ್ಲಕ ಕಾರಣಕ್ಕೆ ಸೇನಾಧಿಕಾರಿಯನ್ನೇ ಕೊಂದ ಯೋಧ

Webdunia
ಮಂಗಳವಾರ, 18 ಜುಲೈ 2017 (12:52 IST)
ಶ್ರೀನಗರ: ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ ಆರಂಭವಾದ ಗಲಾಟೆಯಿಂದಾಗಿ ಸಿಟ್ಟಿಗೆದ್ದ ಭಾರತೀಯ ಸೇನೆ ಯೋಧನೊಬ್ಬ ತನ್ನ ಸೇನಾಧಿಕಾರಿಯನ್ನೇ ಗುಂಡಿಕ್ಕಿ ಹೆತ್ಯೆ ಮಾಡಿರುವ ಘಟನೆ ನಡೆದಿದೆ.
 
ಜಮ್ಮು ಮತ್ತು ಕಾಶ್ಮೀರದ ಬುಚಾರ್ ಪೋಸ್ಟ್ ನಲ್ಲಿರುವ ಸೇನಾ ಕ್ಯಾಂಪ್ ನಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. 71  ರಾಷ್ಟ್ರೀಯ ರೈಫಲ್ಸ್ ತಂಡದ ಸೇನಾಧಿಕಾರಿಯನ್ನು ಸೈನಿಕ ತನ್ನ ಬಂದೂಕಿನಿಂದ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಸೇನಾ ಮೂಲಗಳ ಪ್ರಕಾರ ಅಧಿಕಾರಿಯ ತಪಾಸಣೆ ನಡೆಸಿದಾಗ ಕರ್ತವ್ಯದಲ್ಲಿದ್ದ ಯೋಧ  ಮೊಬೈಲ್​ನಲ್ಲಿ ಮಾತನಾಡುತ್ತಿದ್ದ. ಇದರಿಂದ ಸಿಟ್ಟಿಗೆದ್ದ ಮೇಜರ್ ಶಿಖರ್​ ಅವರು ಯೋಧನಿಂದ ಮೊಬೈಲ್ ಕಿತ್ತುಕೊಂಡು, ಕರ್ತವ್ಯದಲ್ಲಿರುವಾಗ ಫೋನ್ ಬಳಸಬೇಡ ಎಂದು ಖಡಕ್ ಆಗಿ ಹೇಳಿದ್ದಾರೆ.
 
ಇದರಿಂದ ಕ್ರೋಧಗೊಂಡ ಯೋಧ ತನ್ನ ಬಳಿಯಿದ್ದ ಎಕೆ 47 ರೈಫಲ್​ನಿಂದ ಎರಡು ಸುತ್ತು ತನ್ನ ಹಿರಿಯ ಅಧಿಕಾರಿ ಮೇಜರ್ ಶಿಖರ್​ ಅವರತ್ತ ಹಿಂದಿನಿಂದ ಗುಂಡು ಹಾರಿಸಿದ್ದಾನೆ. ಮಾರಣಾಂತಿಕವಾಗಿ ಗಾಯಗೊಂಡ ಮೇಜರ್  ಶಿಖರ್​ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಅವರು ಅಸುನೀಗಿದ್ದರು. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments