ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಸ್ಪಷ್ಟ ಚಿತ್ರಣ ನೀಡುತ್ತಿದ್ದು, ಇದೆ ಮೊದಲ ಬಾರಿಗೆ ಅಸ್ಸಾಂ ರಾಜ್ಯದಲ್ಲಿ ಕಮಲ ಅರಳುವ ನಿರೀಕ್ಷೆ ಹೆಚ್ಚಳವಾಗಿದೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಸರ್ಬಾನಂದ್ ಸೋನೋವಾಲ್ ಸಿಎಂ ಹುದ್ದೆ ಅಲಂಕರಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
126 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 74 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್ 30 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಬಿಜೆಪಿ ಮೊದಲ ಬಾರಿಗೆ ಅಸ್ಸಾಂ ರಾಜ್ಯದಲ್ಲಿ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಳವಾಗಿದೆ.
ವಿಧಾನಸಭಾ ಚುನಾವಣೆ ನಡೆಯುವುದಕ್ಕೂ ಮುನ್ನ ಕಳೆದ 15 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದ ತರುಣ್ ಗೋಗೋಯ್ ನೇತೃತ್ವದ ಸರಕಾರದಲ್ಲಿ ಭಿನ್ನಮತ ಉಂಟಾಗಿದ್ದಲ್ಲದೇ ರಾಜ್ಯದಲ್ಲಿ ಆಡಳಿತ ಸರಕಾರ ವಿರೋಧಿ ಅಲೆ ಎದುರಾಗಿರುವುದೇ ಪಕ್ಷದ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.