ಶಾಂತಿಯ ನೆಲೆವೀಡಾಗಿದ್ದ ಆಸ್ಸಾಂ ರಾಜ್ಯ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಶಾಂತಿ ಕದಡಿದಂತಾಗಿದೆ. ಇಂದು ಶಂಕಿತ ಎನ್‌ಡಿಎಫ್‌ಬಿ ಉಗ್ರರು ಜನನಿಬಿಡ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿದಾಗ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೋಕ್ರಾಝಾರ್ ಪಟ್ಟಣದಿಂದ ಸುಮಾರು ಮೂರು ಕಿ.ಮೀ ದೂರದಲ್ಲಿರುವ ಬಾಲಾಜನ್ ತಿನಿಯಾಲಿ ಮಾರುಕಟ್ಟೆಗೆ ವ್ಯಾನ್‌ನಲ್ಲಿ ಬಂದ ಉಗ್ರರು ಗ್ರೇನೆಡ್‌ಗಳನ್ನು ಎಸೆದಿದ್ದಲ್ಲದೇ ಗುಂಡಿನ ಸುರಿಮಳೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದಾರೆ.
ಆಸ್ಸಾ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಹಾಯ್ ಮಾತನಾಡಿ, ಎನ್‌ಡಿಎಫ್‌ಬಿ ಉಗ್ರರ ಕೈವಾಡ ಕಂಡುಬಂದಿದ್ದು, ಉಗ್ರರ ಪತ್ತೆಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 12,30 ಗಂಟೆಗೆ ಉಗ್ರರು ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿದಾಗ 12 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇತರ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ವಿರುದ್ಧ ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿದಾಗ ಒಬ್ಬ ಉಗ್ರ ಸಾವನ್ನಪ್ಪಿದ್ದು, ಆತನ ಗುರುತು ಪತ್ತೆಯಾಗಿಲ್ಲ ಎಂದು ಡಿಜಿಪಿ ಸಹಾಯ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.