Select Your Language

Notifications

webdunia
webdunia
webdunia
webdunia

ಅಸ್ಸಾಂನಲ್ಲಿ ಭಾರಿ ಬಾಂಬ್ ಸ್ಫೋಟ: ಮೂವರು ಉಗ್ರರ ಸಾವು

ಅಸ್ಸಾಂನಲ್ಲಿ ಭಾರಿ ಬಾಂಬ್ ಸ್ಫೋಟ: ಮೂವರು ಉಗ್ರರ ಸಾವು
ಗುವಾಹಟಿ , ಶುಕ್ರವಾರ, 1 ಆಗಸ್ಟ್ 2014 (13:59 IST)
ಮುಂಗ್ರ್ಯಾ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಬಾಂಬ್ ಸ್ಫೋಟದಲ್ಲಿ ಮೂವರು ಉಗ್ರರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
 
ಉಗ್ರರು ಅಡಗಿದ್ದ ತಾಣದಲ್ಲಿಯೇ ಬಾಂಬ್ ಸ್ಫೋಟವಾಗಿದ್ದರಿಂದ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಉಗ್ರರು ಪೂರ್ವ ಸಿದ್ದತೆಯಲ್ಲಿ ತೊಡಗಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

Share this Story:

Follow Webdunia kannada