Select Your Language

Notifications

webdunia
webdunia
webdunia
webdunia

ಮಣಿಪುರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ

ಮಣಿಪುರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ
ಇಂಫಾಲ್ , ಗುರುವಾರ, 17 ಆಗಸ್ಟ್ 2023 (13:23 IST)
ಇಂಫಾಲ್ : ಮಣಿಪುರ ಹಿಂಸಾಚಾರದ ತನಿಖೆಗಾಗಿ ಸಿಬಿಐ ದೇಶಾದ್ಯಂತ ತನ್ನ ಘಟಕಗಳಿಂದ 29 ಮಹಿಳಾ ಸಿಬ್ಬಂದಿ ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ.

ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ ಮತ್ತು ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್ವೀರ್ ಅವರನ್ನು ಒಳಗೊಂಡ ತಂಡವು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳನ್ನು ಏಕಕಾಲದಲ್ಲಿ ಸೇವೆಗೆ ನಿಯೋಜಿಸಲಾದ ಮೊದಲ ಪ್ರಕರಣ ಇದಾಗಿದೆ. ಅಲ್ಲದೆ 16 ಇನ್ಸ್ಪೆಕ್ಟರ್ ಮತ್ತು 10 ಸಬ್ಇನ್ಸ್ಪೆಕ್ಟರ್ ಸಹ ತಂಡದ ಭಾಗವಾಗಲಿದ್ದಾರೆ. ಪ್ರಕರಣದ ತನಿಖೆಯಲ್ಲಿ ಪಕ್ಷಪಾತದ ಆರೋಪಗಳನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳ ಪಾತ್ರವನ್ನು ಕಡಿಮೆ ಮಾಡಲಾಗಿದೆ.

ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿದೆ. ಇದರಲ್ಲಿ ಮೇ 4 ರಂದು ಜನಸಮೂಹದಿಂದ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಎರಡು ಪ್ರಕರಣಗಳು ಸೇರಿದೆ. ಈ ವೀಡಿಯೋ ಜುಲೈ 16 ರಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡ ನಂತರ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ 9 ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐ ಸಜ್ಜಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭೆ ಚುನಾವಣೆಗೆ ಯತೀಂದ್ರ ಸಿದ್ದರಾಮಯ್ಯ ಸ್ಫರ್ಧೆ ಡೌಟ್...!