Select Your Language

Notifications

webdunia
webdunia
webdunia
webdunia

ಪೊಲೀಸ್ ಪೋಸ್ಟ್ ಮೇಲೆ ದಾಳಿ: ಖಲಿಸ್ತಾನಿ ಮೂವರು ಭಯೋತ್ಪಾದಕರ ಎನ್‌ಕೌಂಟರ್‌

ಪೊಲೀಸ್ ಪೋಸ್ಟ್ ಮೇಲೆ ದಾಳಿ: ಖಲಿಸ್ತಾನಿ ಮೂವರು ಭಯೋತ್ಪಾದಕರ ಎನ್‌ಕೌಂಟರ್‌

Sampriya

ಉತ್ತರಪ್ರದೇಶ , ಸೋಮವಾರ, 23 ಡಿಸೆಂಬರ್ 2024 (15:23 IST)
Photo Courtesy X
ಉತ್ತರಪ್ರದೇಶ: ಇಂದು ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಖಲಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಮೃತ ಭಯೋತ್ಪಾದಕರು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುತರುತಿಸಲಾಗಿದೆ. ಇವರೆಲ್ಲ ಖಲಿಸ್ತಾನ್ ಕಮಾಂಡೋ ಫೋರ್ಸ್ ಎಂಬ ನಿಷೇಧಿತ ಸಂಘಟನೆಗೆ ಸೇರಿದವರಾಗಿದ್ದು, ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ಎಸೆದಿದ್ದಾರೆ.

ಎನ್‌ಕೌಂಟರ್ ನಂತರ, ಪೊಲೀಸರು ಎರಡು ಎಕೆ -47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವಾರು ಲೈವ್ ರೌಂಡ್‌ಗಳನ್ನು ಅವರ ವಶದಿಂದ ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರು ಆರೋಪಿಗಳ ಉಪಸ್ಥಿತಿಯ ಬಗ್ಗೆ ಪಂಜಾಬ್ ಪೊಲೀಸರ ತಂಡವು ಪಿಲಿಭಿತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಪುರನ್‌ಪುರದಲ್ಲಿ ಮೂವರು ಅನುಮಾನಾಸ್ಪದ ವಸ್ತುಗಳಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಸಿಟಿ ರವಿ ಆ ಮಾತು ಹೇಳಿದ್ದನ್ನು ನಾನೇ ಕೇಳಿಸಿಕೊಂಡೆ: ಯತೀಂದ್ರ ಸಿದ್ದರಾಮಯ್ಯ