ನವದೆಹಲಿ : 50 ವರ್ಷದ ವ್ಯಕ್ತಿಯೋರ್ವ ಸುಪ್ರೀಂ ಕೋರ್ಟ್ನ ಹೊಸ ಕಟ್ಟಡದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನೋಯ್ಡಾ ಸೆಕ್ಟರ್ 128ರಲ್ಲಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ ರಾಜಾ ಬಾಬು ಗುಪ್ತಾ ಎಂದು ಗುರುತಿಸಲಾಗಿದೆ.
ಘಟನೆ ವೇಳೆ ವ್ಯಕ್ತಿಗೆ ಅನೇಕ ಸುಟ್ಟ ಗಾಯಗಳಾಗಿದ್ದು, ಅವರನ್ನು ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ.