Webdunia - Bharat's app for daily news and videos

Install App

ಚಲಿಸುತ್ತಿರುವ ಅಟೋದಲ್ಲಿಯೇ ರೇಪ್‌ಗೆ ಯತ್ನ: ಯುವತಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 13 ಡಿಸೆಂಬರ್ 2023 (12:28 IST)
ಮಹಿಳೆ ಅಟೋದಲ್ಲಿ ಗ್ರಾಮಕ್ಕೆ ತೆರಳಲು ಸಾಗುತ್ತಿದ್ದಂತೆ ಇಬ್ಬರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅಟೋ ಚಾಲಕ ತನ್ನ ವಾಹನವನ್ನು ನಿರ್ಜನ ಪ್ರದೇಶಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಾನೆ. ಇದನ್ನು ಅರಿತ ಮಹಿಳೆ ಅಟೋದಿಂದ ಹಾರಿ ತನ್ನ ಶೀಲವನ್ನು ಉಳಿಸಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಟೋ ಚಾಲಕನೊಬ್ಬ ಪ್ರಯಾಣಿಕಳ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದಾಗ, ಮಹಿಳೆ ವೇಗವಾಗಿ ಸಾಗುತ್ತಿದ್ದ ಅಟೋದಿಂದ ಹಾರಿ ತನ್ನ ಮಾನವನ್ನು ಉಳಿಸಿಕೊಂಡ ಘಟನೆ ಮಹಿಮಾಲೂರು ಕ್ರಾಸ ಬಳಿ ವರದಿಯಾಗಿದೆ. 
 
ಮುಂದಾಗುವ ಘಟನೆಯ ಬಗ್ಗೆ ಎಚ್ಚೆತ್ತುಕೊಂಡ ಮಹಿಳೆ ಅಟೋದಿಂದ ಹೊರಹಾರಿದ್ದಾಳೆ. ದಾರಿಹೋಕರು ಆಕೆಯ ಸ್ಥಿತಿಯನ್ನು ಗಮನಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
 
ಪೊಲೀಸ್ ಠಾಣೆಯಲ್ಲಿ ಅಟೋಚಾಲಕ ಮತ್ತು ಇತರ ಇಬ್ಬರು ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ, ಅಪಹರಣ ಯತ್ನ ದೂರು ದಾಖಲಿಸಿದ್ದಾಳೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ