ಆಗಸ್ಟ್ ಜಿಎಸ್‌ಟಿ ಶೇ.28 ಏರಿಕೆ !

Webdunia
ಶುಕ್ರವಾರ, 2 ಸೆಪ್ಟಂಬರ್ 2022 (08:51 IST)
ನವದೆಹಲಿ : ಆಗಸ್ಟ್ ತಿಂಗಳಿನಲ್ಲಿ 1,43,612 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹ ಶೇ. 28ರಷ್ಟು ಏರಿಕೆಯಾಗಿದೆ. ಕಳೆದ ಆಗಸ್ಟ್ನಲ್ಲಿ 1,12,020 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಸತತ 6ನೇ ಬಾರಿಗೆ ಜಿಎಸ್ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.

ಜುಲೈನಲ್ಲಿ ಸಂಗ್ರಹವಾದ ಜಿಎಸ್ಟಿಗೆ ಹೋಲಿಸಿದರೆ ಆಗಸ್ಟ್ ಜಿಎಸ್ಟಿ ಸಂಗ್ರಹ ಶೇ. 4ರಷ್ಟು ಕಡಿಮೆಯಾಗಿದೆ. ಜುಲೈನಲ್ಲಿ 1,48,995 ಕೋಟಿ ರೂ. ಜಿಎಸ್ಟಿ ಆದಾಯ ಸಂಗ್ರಹವಾಗಿತ್ತು. 

ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್ಟಿ ಪಾಲು 24,710 ಕೋಟಿ ರೂ.ಗಳಾಗಿದ್ದರೆ, ರಾಜ್ಯ ಜಿಎಸ್ಟಿ 30,951 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 77,782 ಕೋಟಿ ರೂ.ಗಳಾಗಿವೆ. ಇದರಲ್ಲಿ 10,168 ಕೋಟಿ ರೂ. ಸೆಸ್ ಕೂಡ ಸೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments