Select Your Language

Notifications

webdunia
webdunia
webdunia
webdunia

ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ!

ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ!
ನವದೆಹಲಿ , ಮಂಗಳವಾರ, 25 ಜನವರಿ 2022 (13:43 IST)
ನವದೆಹಲಿ : ಸೆಂಟ್ರಲ್ ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಬ್ಯಾಂಕ್ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 28 ವರ್ಷದ ಆಟೋ ರಿಕ್ಷಾ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
 
ಆರೋಪಿಯನ್ನು ಗೋಪಾಲ್ ಎಂದು ಗುರುತಿಸಲಾಗಿದ್ದು, ಈತ ನ್ಯೂ ಕರ್ದಂಪುರಿ ನಿವಾಸಿಯಾಗಿದ್ದಾನೆ. ಮಹಿಳೆ ಪಶ್ಚಿಮ ಉತ್ತರ ಪ್ರದೇಶದ ಬ್ಯಾಂಕ್ನಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿಯಲ್ಲಿ ತನ್ನ ಪೋಷಕರೊಂದಿಗೆ ಉಳಿದುಕೊಂಡಿದ್ದಾರೆ.

ಘಟನೆ ಕುರಿತಂತೆ ಮಹಿಳೆ ನೀಡಿರುವ ದೂರಿನಲ್ಲಿ, ಆರೋಪಿ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದ ಬಳಿ ಪ್ರಕೃತಿಯ ಕರೆಗೆ ಓಗೊಟ್ಟು ತನ್ನ ವಾಹನವನ್ನು ನಿಲ್ಲಿಸಿದ್ದಾನೆ. ಆದರೆ ನಂತರ ತನನ್ನು ಹಿಡಿದುಕೊಂಡು ಅನುಚಿತವಾಗಿ ವರ್ತಿಸಿದ್ದಾನೆ.

ಕೊನೆಗೆ ಮಹಿಳೆ ಜೋರಾಗಿ ಕಿರುಚಾಡಿದ್ದನ್ನು ಕಂಡು ಆರೋಪಿ ಗಾಬರಿಯಿಂದ ಆಟೋ ಜೊತೆ ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಇದೀಗ ಘಟನೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕ ಗೋಪಾಲ್ ಅವರನ್ನು ಬಂಧಿಸಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಜಲ ಸಂರಕ್ಷಣೆ ಅಭಿಯಾನದ ರಾಯಭಾರಿ ಆಯ್ಕೆ?