Webdunia - Bharat's app for daily news and videos

Install App

ಕೋಕಾ ಕೋಲಾ ಮತ್ತು ಪೆಪ್ಸಿಕೊ ಮೇಲೆ ಹೆಚ್ಚಿನ ತೆರಿಗೆಗೆ ಆಗ್ರಹ

Webdunia
ಗುರುವಾರ, 22 ಸೆಪ್ಟಂಬರ್ 2016 (17:30 IST)
ಕೋಕಾ ಕೋಲಾ  ಮತ್ತು ಪೆಪ್ಸಿಕೊ ಕಂಪನಿಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುವಂತೆ ಯೋಗ ಗುರು ಬಾಬಾ ರಾಮದೇವ್ ಮತ್ತು ಆರ್‌ಎಸ್ಎಸ್ ಸರ್ಕಾರಕ್ಕೆ ಒತ್ತಾಯಿಸುತ್ತಿವೆ ಎಂದು ವರದಿಯಾಗಿದೆ. 


ತಮ್ಮ ಪತಂಜಲಿ ಸಂಸ್ಥೆಯ ಉತ್ಪಾದನೆಗಳ ಮೂಲಕ ವಿದೇಶಿ ಕಂಪನಿಗಳಿಗೆ ಪೈಪೋಟಿ ನೀಡುತ್ತಿರುವ ಯೋಗ ಗುರು ಬಾಬಾ ರಾಮದೇವ್ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರತಿನಿಧಿಗಳು ಜಾಸ್ತಿ ಸಕ್ಕರೆ ಅಂಶನ್ನು ಹೊಂದಿರುವ ತಂಪು ಪಾನೀಯಗಳನ್ನು ಉತ್ಪಾದಿಸುವ ಕಂಪನಿಗಳ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ವಿತ್ತ ಮತ್ತು ಆರೋಗ್ಯ ಸಚಿವರಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 
 
ವರದಿಗಳ ಪ್ರಕಾರ ದೇಶದಲ್ಲಿನ ವಯಸ್ಕರು ಮತ್ತು ಮಕ್ಕಳು ಸಂಸ್ಕರಿಸಿದ ಆಹಾರ ಮತ್ತು ಪಾನೀಯಗಳಿಂದ ದೊಡ್ಡ ಪ್ರಮಾಣದಲ್ಲಿ ಸಕ್ಕರೆಯನ್ನು ಸೇವಿಸುತ್ತಿದ್ದಾರೆ. ಇದು ಆರೋಗ್ಯಕ್ಕೆ ಹಾನಿಕರ ಎಂಬುದು ಸಂಘದ ಪ್ರತಿನಿಧಿಗಳ ಮತ್ತು ರಾಮದೇವ್ ಅವರ ವಾದವಾಗಿದೆ. 
 
ಕಳೆದ ವರ್ಷ, ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಅರವಿಂದ್ ಸುಬ್ರಹ್ಮಣ್ಯನ್ ಪಾನೀಯಗಳು, ತಂಬಾಕು ಮತ್ತು ಐಷಾರಾಮಿ ಕಾರುಗಳ ಮೇಲೆ 40%  ' ಪಾಪದ ತೆರಿಗೆ '  (ಸಿನ್ ಟ್ಯಾಕ್ಸ್) ಹೇರುವಂತೆ ಆಗ್ರಹಿಸಿದ್ದರು (ಈ ದರ ಸೂಚಿತ  ಜಿಎಸ್‌ಟಿ ದರ 17-18 % ಕ್ಕಿಂತ ಸುಮಾರು ಎರಡು ಪಟ್ಟು) .

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments