Publish Date: Mon, 15 Jul 2019 (10:09 IST)
Updated Date: Mon, 15 Jul 2019 (10:11 IST)
ನವದೆಹಲಿ : ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-2 ಉಡಾವಣೆಯನ್ನು ರದ್ದುಗೊಳಿಸಲಾಗಿದೆ.
ಉಪಗ್ರಹವನ್ನು ಭೂ ಕಕ್ಷೆಯಿಂದ ಚಂದ್ರನ ಮೇಲ್ಮೈಗೆ ಉಡಾಯಿಸುವ ಉದ್ದೇಶದಿಂದ ಚಂದ್ರಯಾನ-2 ಯೋಜನೆಗಾಗಿ ಇಸ್ರೋ GSLV Mk III (ಜಿಎಸ್ಎಲ್ವಿ ಎಂಕೆ 3) ಎಂಬ ಹೊಸ ಮಾದರಿಯ ನೂತನ ತಂತ್ರಜ್ಞಾನಗಳನ್ನು ಹೊಂದಿರುವ ರಾಕೆಟ್ ಒಂದನ್ನು ನಿರ್ಮಿಸಿದೆ.
ಇದರ ಉಡಾವಣೆಗೆ 56 ನಿಮಿಷ 24 ಸೆಕೆಂಡ್ ಬಾಕಿ ಇರುವಾಗ ತಾಂತ್ರಿಕ ದೋಷ ಪತ್ತೆಯಾಗಿತ್ತು.ತಕ್ಷಣ ಉಡಾವಣೆಯನ್ನು ರದ್ದುಗೊಳಿಸಿದ ಇಸ್ರೋ ಸುದ್ದಿಗೋಷ್ಠಿ ಕರೆದು ಚಂದ್ರಯಾನ-2 ರದ್ದು ಮಾಡಲಾಗಿದ್ದು, ಶೀಘ್ರದಲ್ಲಿಯೇ ಮುಂದಿನ ಉಡಾವಣಾ ಸಮಯ ಘೋಷಿಸುವುದಾಗಿ ಹೇಳಿದೆ.