Select Your Language

Notifications

webdunia
webdunia
webdunia
webdunia

ಮಾಜಿ ಗೃಹ ಸಚಿವ ಅನಿಲ್ ಅನಿಲ್ ದೇಶ್‌ಮುಖ್‌ಗೆ ಜಾಮೀನು

ಮಾಜಿ ಗೃಹ ಸಚಿವ ಅನಿಲ್ ಅನಿಲ್ ದೇಶ್‌ಮುಖ್‌ಗೆ ಜಾಮೀನು
ಮುಂಬೈ , ಬುಧವಾರ, 5 ಅಕ್ಟೋಬರ್ 2022 (08:47 IST)
ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅಕ್ಟೋಬರ್ 13 ರಂದು ಜಾರಿಗೆ ಬರಲಿದೆ ಎಂದು ಹೈಕೋರ್ಟ್ ಹೇಳಿದೆ. 1 ಲಕ್ಷ ರೂ. ಶ್ಯೂರಿಟಿ ಮತ್ತು ಇಡಿ ಸಮನ್ಸ್ ಜಾರಿ ಮಾಡಿದಾಗ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ದೇಶ್ಮುಖ್ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಈ ವರ್ಷದ ಆರಂಭದಲ್ಲಿ ತಿರಸ್ಕರಿಸಿತ್ತು. ಆ ಸಂದರ್ಭ ಅಕ್ರಮ ಹಣ ವರ್ಗಾವಣೆಯಲ್ಲಿ ದೇಶ್ಮುಖ್ ಭಾಗಿಯಾಗಿರುವ ಬಗ್ಗೆ ಪ್ರಾಥಮಿಕವಾಗಿ ಪುರಾವೆಗಳಿವೆ ಎಂದು ಇಡಿ ವಾದಿಸಿತ್ತು. 

ಮಹಾರಾಷ್ಟ್ರದ ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕಾರವನ್ನು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ PFI ಜೊತೆ ನಂಟು!