Select Your Language

Notifications

webdunia
webdunia
webdunia
Wednesday, 9 April 2025
webdunia

ಸರ್ಕಾರಕ್ಕೆ ಬೋಳುತಲೆ ಪುರುಷರ ಸಂಘ ಮನವಿ?

ಪಿಂಚಣಿ
ಹೈದರಾಬಾದ್ , ಸೋಮವಾರ, 9 ಜನವರಿ 2023 (09:29 IST)
ಹೈದರಾಬಾದ್: ಇತ್ತೀಚೆಗಷ್ಟೇ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮದ್ಯಪಾನಪ್ರಿಯರ ಸಂಘ ಸರ್ಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕದಾದ್ಯಂತ ಸುದ್ದಿಯಾಗಿತ್ತು.

ಇದೀಗ ಬೋಳುತಲೆ ಪುರುಷರ ಸಂಘವೊಂದು, ಪ್ರತಿ ತಿಂಗಳು 6 ಸಾವಿರ ಪಿಂಚಣಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿರೋದು ಸುದ್ದಿಯಾಗಿದೆ. ಹೌದು. ತಮಗೆ ತಿಂಗಳಿಗೆ 6 ಸಾವಿರ ಪಿಂಚಣಿ ನೀಡುವಂತೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ತಂಗಲ್ಲಪಲ್ಲಿ ಗ್ರಾಮದ ಬೋಳುತಲೆಯ ಪುರುಷರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಬೋಳು ತಲೆಯ ಪುರುಷರಿಗೆ ಸಂಕ್ರಾಂತಿ ಉಡುಗೊರೆಯಾಗಿ ಪಿಂಚಣಿ ಘೋಷಿಸಬೇಕು. ಸರ್ಕಾರ ವೃದ್ಧರು, ವಿಧವೆಯರು, ದೈಹಿಕ ವಿಕಲಚೇತನರು ಮತ್ತು ಇತರರಿಗೆ ಪಿಂಚಣಿ ನೀಡುತ್ತಿದೆ. ಅದರಂತೆ ನಮ್ಮ ಮನವಿಯನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಬೋಳುತಲೆ ಪುರುಷರ ಸಂಘ ತೆಲಂಗಾಣ ಸರ್ಕಾರಕ್ಕೆ ಆಗ್ರಹಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜ್ಞಾನ ಕಡಿಮೆ : ನಿತೀಶ್ ಕುಮಾರ್