Webdunia - Bharat's app for daily news and videos

Install App

ಪ್ರೀತಿಯ ಸುಳಿಗೆ ಬಿದ್ದ ಬಾಲೆ ! ಮುಂದೇನಾಯ್ತು?

Webdunia
ಸೋಮವಾರ, 15 ಆಗಸ್ಟ್ 2022 (13:22 IST)
ಚಂಡೀಗಢ : ಮದುವೆಯಾಗಲು ನಿರಾಕರಿಸಿದ್ದಕ್ಕೆ 17 ವರ್ಷದ ಹುಡುಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ ನಡೆದಿದೆ.

ಆರೋಪಿಯು ಪಂಜೋಖ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ನಾಲಾ ಗ್ರಾಮದ ನಿವಾಸಿಯಾಗಿದ್ದು, ಮೃತ ಹುಡುಗಿಯ ತಂದೆ ನೀಡಿದ ದೂರಿನ ಮೇರೆಗೆ 21 ವರ್ಷದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. 

ಟೀ ವ್ಯಾಪಾರಿಯಾಗಿರುವ ಹುಡುಗಿಯ ತಂದೆ, ಯುವಕ ಮತ್ತು ಅವರ ಮಗಳು ಪ್ರೀತಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ತಿಳಿದುಬಂದಿದೆ. ತಮ್ಮ ಮಗಳು ತನ್ನ ಸಹೋದರನ ಬಳಿ ಯುವಕ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ ಎಂದು ಹೇಳಿಕೊಂಡಿದ್ದಳು. ಆದರೆ ನಂತರದ ದಿನಗಳಲ್ಲಿ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ. 

ಈ ವಿಚಾರವನ್ನು ನನ್ನ ಮಗಳು ಸಹೋದರನೊಂದಿಗೆ ಹಂಚಿಕೊಂಡಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಆಕೆಯನ್ನು ಸಮಾಧಾನ ಮಾಡಲು ಸಹೋದರ ಪ್ರಯತ್ನಿಸುತ್ತಿದ್ದನು. ಆದರೆ ಆಗಸ್ಟ್ 8ರಂದು ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ.

ನಂತರ ಪ್ರಜ್ಞಾಹೀನಳಾಗಿದ್ದ ಆಕೆಯನ್ನು ಸಮೀಪದ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿ ಮರುದಿನವೇ ಡಿಸ್ಚಾರ್ಜ್ ಮಾಡಿದ್ದರು.

ಮನೆಯಲ್ಲಿಯೇ ಸಂಪೂರ್ಣ ಚೇತರಿಸಿಕೊಳ್ಳಲು ಕೆಲವು ಔಷಧಗಳನ್ನು ನೀಡಿದ್ದರು. ಆದರೆ ಶುಕ್ರವಾರ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹೀಗಾಗಿ ಅವಳನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments