Select Your Language

Notifications

webdunia
webdunia
webdunia
webdunia

ಭಾರತಕ್ಕೆ ಆಗಮಿಸಿದ ಬರಾಕ್, ಮಿಶೈಲ್ ಓಬಾಮಾ

ಭಾರತಕ್ಕೆ ಆಗಮಿಸಿದ ಬರಾಕ್, ಮಿಶೈಲ್ ಓಬಾಮಾ
ನವದೆಹಲಿ , ಭಾನುವಾರ, 25 ಜನವರಿ 2015 (11:10 IST)
ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಅವರ ಪತ್ನಿ ಮಿಶಲ್ ಒಬಾಮಾ ಭಾರತಕ್ಕೆ ಇಂದು ಬೆಳಿಗ್ಗೆ ಆಗಮಿಸಿದ್ದಾರೆ. ದೆಹಲಿಯಲ್ಲಿರುವ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಬಾಮಾ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.
 
ಒಬಾಮಾ ಭೇಟಿ ನೀಡಿದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, 500 ಕಿ.ಮೀ ವ್ಯಾಪ್ತಿಯಲ್ಲಿ ವಿಮಾನ ಹಾರಾಟ ಬಂದ್ ಮಾಡಲಾಗಿದೆ.
 
ವಿಮಾನನಿಲ್ದಾಣದದಿಂದ ಹೊರಟ ಒಬಾಮಾ ಹೋಟೆಲ್ ಮೌರ್ಯ ಶೆರಟಾನ್‌ನಲ್ಲಿ ಕೆಲ ಗಂಟೆಗಳ ಕಾಲ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ದೆಹಲಿಯ ಕೆಲ ನಿರ್ದಿಷ್ಟ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನೀಯೋಜಿಸಲಾಗಿದ್ದು, ಭದ್ರತೆಗಾಗಿ ಒಟ್ಟು 60 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
 

Share this Story:

Follow Webdunia kannada