ಪ್ರಧಾನಿ ಮೋದಿ ತಾಯಿ ನಿಂದನೆ: ಕ್ಷಮೆ ಕೇಳಿದ ಬಿಬಿಸಿ

Webdunia
ಗುರುವಾರ, 4 ಮಾರ್ಚ್ 2021 (09:26 IST)
ನವದೆಹಲಿ: ಪ್ರಧಾನಿ ಮೋದಿ ಮತ್ತು ಅವರ ತಾಯಿ 99 ವರ್ಷದ ಹೀರಾಬೆನ್ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಬಗ್ಗೆ ಬಿಬಿಸಿ ನಿರೂಪಕರು ಕ್ಷಮೆ ಯಾಚಿಸಿದ್ದಾರೆ.

 
ಬಿಬಿಸಿ ಏಷ್ಯನ್ ನೆಟ್ವರ್ಕ್ ಆಯೋಜಿಸಿದ್ದ ಬಿಗ್ ಡಿಬೇಟ್ ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ಮೋದಿ ಮತ್ತು ಅವರ ತಾಯಿ ಬಗ್ಗೆ ಅವಾಚ್ಯ ಶಬ್ಧ ಬಳಸಿ ನಿಂದಿಸಿದ್ದ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ಬಗ್ಗೆ ಚರ್ಚೆ ನಡೆಯಿತು.

 ಈ ವೇಳೆ ಕರೆ ಮಾಡಿದ ಸೈಮನ್ ಎಂಬಾತ ಏಕಾಏಕಿ ಪ್ರಧಾನಿ ಮತ್ತು ತಾಯಿ ವಿರುದ್ಧ ಅವಾಚ್ಯವಾಗಿ ಮಾತನಾಡಿದ್ದರಿಂದ ಗಲಿಬಿಲಿಗೊಂಡ ನಿರೂಪಕಿ ಕರೆ ಅರ್ಧದಲ್ಲೇ ತುಂಡರಿಸಿದ್ದರು. ಇದೀಗ ಈ ಘಟನೆಗಾಗಿ ನಿರೂಪಕಿ ಕ್ಷಮೆ ಯಾಚಿಸಿದ್ದಾರೆ.

ಇದು ಮೋದಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದೆ. ಆದರೆ ಇಷ್ಟೆಲ್ಲಾ ಘಟನೆ ನಡೆದರೂ ಕೇವಲ ನಿರೂಪಕಿ ಮಾತ್ರ ಕ್ಷಮೆ ಕೇಳಿದ್ದಾರೆ. ಬಿಬಿಸಿ ಪ್ರತಿಕ್ರಿಯಿಸಿಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments