Select Your Language

Notifications

webdunia
webdunia
webdunia
webdunia

ಯೂಟ್ಯೂಬ್ ವಿಡಿಯೋ ಮಾಡುವ ಮುನ್ನ ಎಚ್ಚರ ..!

ಯೂಟ್ಯೂಬ್
ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ 11 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
 
ತೆಲಂಗಾಣದ ಸಿರಿಸಿಲ್ಲಾದಲ್ಲಿ 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಯೂಟ್ಯೂಬ್ನಲ್ಲಿ ತಮಾಷೆಯ ವಿಡಿಯೋಗಳನ್ನು ಸಾಮಾನ್ಯವಾಗಿ ವೀಕ್ಷಿಸುತ್ತಿದ್ದ.

ಶನಿವಾರ ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನೆ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್ ನೋಡಲು ಶುರು ಮಾಡಿದ್ದ, ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ ಮೊಳೆಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

ಬಾಲಕನನ್ನು ಮಂಡಲ್ ಸೆಂಟರ್ನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಮ್ ಪ್ರಿಯರೇ ಹುಷಾರ್ ! ಜಿಮ್ ಛಾವಣಿ ಕುಸಿತದಿಂದ 10 ಮಂದಿ ದುರ್ಮರಣ