ವಿಷದ ಇಂಜೆಕ್ಷನ್ ಕೊಡಲು ತಂದೆಯಿಂದಲೇ ಸುಪಾರಿ!?

Webdunia
ಸೋಮವಾರ, 8 ಆಗಸ್ಟ್ 2022 (07:37 IST)
ಮೀರತ್ : ಮಕ್ಕಳ ಅಂತರ್ಜಾತಿ, ಅಂತರ್ ಮತೀಯ ಮದುವೆಗಳನ್ನು ವಿರೋಧಿಸುವ ಪೋಷಕರು ಹೆತ್ತ ಮಕ್ಕಳನ್ನೇ ಅದಕ್ಕಾಗಿ ಕೊಲ್ಲುವ ಮರ್ಯಾದಾ ಹತ್ಯೆ ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇವೆ.
 
ಇದೇ ರೀತಿಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.  17 ವರ್ಷ ಮಗಳು ಪ್ರೀತಿಸಿದವನನ್ನು ಬಿಡುತ್ತಿಲ್ಲ, ತನ್ನ ಮಾತು ಕೇಳುತ್ತಿಲ್ಲ ಎಂದು ತಂದೆಯೇ ಮಗಳನ್ನು ಕೊಲ್ಲಲು ಮುಂದಾಗಿದ್ದಾನೆ. 

ಮಗಳು ತನ್ನ ಪ್ರಿಯಕರನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲಿಲ್ಲ ಎಂಬ ದ್ವೇಷದಿಂದ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ತಂದೆಯೇ ಮಗಳನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾನೆ. ಆಸ್ಪತ್ರೆಯ ವಾರ್ಡ್ ಬಾಯ್ಗೆ ಮಗಳನ್ನು ಕೊಲ್ಲುವ ಸುಪಾರಿ ನೀಡಿದ್ದಾನೆ.

ಆತ 17 ವರ್ಷದ ಮಗಳಿಗೆ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಚುಚ್ಚು ಮದ್ದಿನ ಮೂಲಕ ನೀಡಿದ್ದಾನೆ ಎಂದು  ಪೊಲೀಸರು ತಿಳಿಸಿದ್ದಾರೆ.

ಆಕೆಯ ಆರೋಗ್ಯ ಸ್ಥಿತಿ ಹಠಾತ್ ಹದಗೆಟ್ಟ ನಂತರ, ಆಸ್ಪತ್ರೆಯ ವೈದ್ಯರು ಆಕೆಗೆ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಚುಚ್ಚುಮದ್ದು ನೀಡಿರುವುದನ್ನು ಕಂಡುಹಿಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆ ನವೀನ್ ಕುಮಾರ್, ವಾರ್ಡ್ ಬಾಯ್ ನರೇಶ್ ಕುಮಾರ್ ಮತ್ತು ಮಹಿಳಾ ಉದ್ಯೋಗಿ ಕೊಲೆ ಯತ್ನದಲ್ಲಿ ಭಾಗಿಯಾ್ಗಿದ್ದಾರೆ. ಶನಿವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಈ ಮೂವರನ್ನು ಬಂಧಿಸಲಾಗಿದೆ.

ಶುಕ್ರವಾರ ರಾತ್ರಿ ನವೀನ್ ಕುಮಾರ್ ತಮ್ಮ ಮಗಳನ್ನು ಕಂಕರಖೇಡದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ಗಂಟೆಗಳ ನಂತರ, ಅವರು ಅವಳನ್ನು ಮೋದಿಪುರಂನ ಫ್ಯೂಚರ್ ಪ್ಲಸ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಅಲ್ಲಿ ಆಕೆಯ ಆರೋಗ್ಯವು ಇದ್ದಕ್ಕಿದ್ದಂತೆ ಹದಗೆಟ್ಟಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆಕೆಗೆ ಚುಚ್ಚುಮದ್ದು ನೀಡಿದ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು, ವಾರ್ಡ್ ಬಾಯ್ ನರೇಶ್ ಕುಮಾರ್ ನನ್ನು ವಶಕ್ಕೆ ಪಡೆಯಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments