Select Your Language

Notifications

webdunia
webdunia
webdunia
webdunia

ಬೆಟ್ಟಿಂಗ್: ಮಾಧ್ಯಮಗಳಿಗೆ ಕೇಂದ್ರ ಖಡಕ್ ಸೂಚನೆ

ಬೆಟ್ಟಿಂಗ್: ಮಾಧ್ಯಮಗಳಿಗೆ ಕೇಂದ್ರ ಖಡಕ್ ಸೂಚನೆ
ನವದೆಹಲಿ , ಭಾನುವಾರ, 27 ಆಗಸ್ಟ್ 2023 (09:21 IST)
ನವದೆಹಲಿ : ಆನ್‍ಲೈನ್ ಬೆಟ್ಟಿಂಗ್ ಪ್ಲಾಟ್‍ಫಾರ್ಮ್‍ಗಳ ಕುರಿತಾದ ಜಾಹೀರಾತುಗಳ ವಿಚಾರವಾಗಿ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ.

ಮಾಧ್ಯಮಗಳು ತಕ್ಷಣ ಇಂತಹ ಜಾಹೀರಾತುಗಳನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ರವಾನಿಸಿದೆ.

ಟಿವಿ ಚಾನೆಲ್‍ಗಳು, ಡಿಜಿಟಲ್ ಮೀಡಿಯಾ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಬೆಟ್ಟಿಂಗ್ ಹಾಗೂ ಜೂಜು ಸಂಬಂಧಿತ ಜಾಹೀರಾತುಗಳನ್ನು ತಡೆಯುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚಿಸಿದೆ.

ಇಂತಹ ಜಾಹೀರಾತುಗಳಿಗೆ ಪಾವತಿಸಲು ಕಪ್ಪು ಹಣ ಬಳಕೆಯಾಗುವ ಸಾಧ್ಯತೆಯಿದೆ ಎಂದು ಸಚಿವಾಲಯ ತಿಳಿಸಿದೆ.  ಇದಲ್ಲದೆ ಪ್ರಮುಖ ಕ್ರೀಡಾಕೂಟಗಳಲ್ಲಿ ವಿಶೇಷವಾಗಿ ಕ್ರಿಕೆಟ್‍ನಲ್ಲಿ ಅಂತಹ ಬೆಟ್ಟಿಂಗ್ ಮತ್ತು ಜೂಜಿನ ವೇದಿಕೆಗಳ ಪ್ರಚಾರವನ್ನು ಹೆಚ್ಚಿಸುವ ಪ್ರವೃತ್ತಿ ಇದೆ. ಶೀಘ್ರದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸಚಿವಾಲಯ ಕ್ರಮಕ್ಕೆ ಮುಂದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೆಸಾರ್ಟ್‌ ತೋರಿಸುತ್ತೇನೆ ಬಾ ಅಂತ ಕರೆತಂದು ಆತ ಮಾಡಿದ್ದಾದ್ರು ಏನು?