Publish Date: Sat, 05 Nov 2022 (11:36 IST)
Updated Date: Sat, 05 Nov 2022 (11:38 IST)
ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು,
ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ.
MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ.
ಕೆಜಿಎಫ್ ಸಿನಿಮಾದ ಸುಲ್ತಾನಾ.. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವರ MRT ಸಂಸ್ಥೆಯು ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.