Publish Date: Wed, 03 Jan 2018 (11:10 IST)
Updated Date: Wed, 03 Jan 2018 (11:21 IST)
ಚಿಕ್ಕೋಡಿ: ಭೀಮಾ ಕೋರೆಗಾಂವ್ ಹಿಂಸಾಚಾರದ ಪ್ರಕರಣದಿಂದ ಮಹಾರಾಷ್ಟ್ರ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್'ಗಳ ಸಂಚಾರ ಸ್ಥಗಿತಗೊಂಡಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗೃತ ಕ್ರಮವಾಗಿ ಚಿಕ್ಕೋಡಿ ವಾಯುವ್ಯ ವಿಭಾಗದ ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಚಿಕ್ಕೋಡಿಯಿಂದ ಪುಣೆ, ಮುಂಬೈ, ಸಾಂಗ್ಲಿ, ಮೀರಜ್ ಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.
ದಲಿತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್'ಗೆ ಕರೆ ನೀಡಲಾಗಿದೆ. ಭೀಮಾ ಕೋರೆಗಾಂವ್ ವೇಳೆ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿ ಮಹಾರಾಷ್ಟ್ರದಾದ್ಯಂತ ತೀವ್ರ ಪ್ರತಿಭಟನೆ ಮಾಡಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ