ಡೆಡ್ಲಿ ಕೊರೊನಾ ಅಟ್ಟಹಾಸ ನಡುವೆಯೇ ವಿಧಾನಸಭೆ ಮುಂದಿನ ಅವಧಿಯ ಚುನಾವಣೆಗೆ ಮುಹೂರ್ತ ಫಿಕ್ಸ್ ಆದಂತಿದೆ.
ಬಿಹಾರ ರಾಜ್ಯದ ವಿಧಾನಸಭೆಯ ಅವಧಿ ಪೂರ್ಣಗೊಂಡಿದೆ. ಹಿಗಾಗಿ ಅಲ್ಲಿನ ವಿಧಾನಸಭೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಅಂತಿಮ ಹಂತದ ಸಿದ್ಧತೆ ನಡೆಸಿದೆ.
ಸೆಪ್ಟಂಬರ್ ಮೂರನೇ ವಾರದಲ್ಲಿ ಚುನಾವಣೆ ವೇಳಾ ಪಟ್ಟಿ ಪ್ರಕಟವಾಗುವ ಲಕ್ಷಣಗಳು ಕಂಡುಬಂದಿವೆ.
ಚುನಾವಣೆ ವೇಳೆ ಕೋವಿಡ್ – 19 ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸುವಂತೆ ಆಯೋಗ ಖಡಕ್ ಸೂಚನೆ ಕೊಡಲಿದೆ.